ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಕನ್ನಡಪರ ಸಂಘಟನೆ ಮುಖಂಡರು ಅರೆಸ್ಟ್‌, ನಗರದಲ್ಲಿ ಹೇಗಿದೆ ಕರ್ನಾಟಕ ಬಂದ್‌?

0
128

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಕನ್ನಡಪರ ಸಂಘಟನೆ ಮುಖಂಡರು ಅರೆಸ್ಟ್‌, ನಗರದಲ್ಲಿ ಹೇಗಿದೆ ಕರ್ನಾಟಕ ಬಂದ್‌?

SHIMOGA : ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಲಾಗಿದೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ಇವತ್ತು ಬೆಳಗ್ಗೆ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮುಂಭಾಗ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ಮಾಡಿದರು. ತಮಿಳುನಾಡಿಗೆ ನೀರು ಹರಿಸದಂತೆ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಕನ್ನಡಪರ ಸಂಘಟನೆಗಳ ಮುಖಂಡರನ್ನು ಬಂಧಿಸಿದರು.

ಶಿವಮೊಗ್ಗದಲ್ಲಿ ಹೇಗಿದೆ ಪರಿಸ್ಥಿತಿ?
ಶಿವಮೊಗ್ಗ ನಗರದಲ್ಲಿ ಕರ್ನಾಟಕ ಬಂದ್‌ಗೆ (Karnataka Bandh) ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆಯಿಂದಲೆ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ಸುಗಳು ರಸ್ತೆಗಿಳಿದಿವೆ. ಆಟೋ, ಟ್ರ್ಯಾಕ್ಸ್‌ ಎಂದಿನಂತೆ ಸಂಚರಿಸುತ್ತಿವೆ. ಅಂಗಡಿಗಳ ಬಾಗಿಲು ತೆಗೆಯಲಾಗುತ್ತಿದೆ. ಮಾರುಕಟ್ಟೆಗಳಲ್ಲಿ ವ್ಯಾಪಾರ ನಡೆಯುತ್ತಿದೆ

ಇನ್ನು, ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ.

ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವದ ಹಿನ್ನಲೆ ಗುರುವಾರ ಶಿವಮೊಗ್ಗದಲ್ಲಿ ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಬಂದ್‌ ಮಾಡಿದ್ದರು. ಈ ಹಿನ್ನೆಲೆ ಇವತ್ತಿನ ಕರ್ನಾಟಕ ಬಂದ್‌ಗೆ ಶಿವಮೊಗ್ಗದಲ್ಲಿ ಬೆಂಬಲ ವ್ಯಕ್ತವಾಗುವ ಸಾದ್ಯತೆ ಇಲ್ಲ.