Wednesday, September 25, 2024
spot_img

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಶಿವಮೊಗ್ಗ, ಅಕ್ಟೋಬರ್ 03, (ಕರ್ನಾಟಕ ವಾರ್ತೆ) : ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವು ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-IIIಬಿ) ಅಭಿವೃದ್ಧಿಗಾಗಿ 2023-24 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಕೆಳಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಸಾಲ ಯೋಜನೆಗಳು;
ಬಸವಬೆಳಗು ಯೋಜನೆ (Fresh Students) ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು ಅವರ ಕುಟುಂಬ ವಾರ್ಷಿಕ ಆದಾಯ ರೂ.3.50 ಲಕ್ಷ ಮಿತಿಯಲ್ಲಿರುವ ವಿದ್ಯಾರ್ಥಿಗಳ ವೃತ್ತಿಪರ ಕೋರ್ಸ್‍ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ವಾರ್ಷಿಕ ರೂ.1.00 ಲಕ್ಷಗಳಂತೆ ಕೊರ್ಣ ಅವಧಿಗೆ ಗರಿಷ್ಠ ರೂ.4.00 ಲಕ್ಷಗಳಿಂದ 5,00 ಲಕ್ಷಗಳವರೆಗೆ ವಾರ್ಷಿಕ ಶೇ.2 ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು. ವಿದ್ಯಾರ್ಥಿಗಳು CET/NEET ಇತ್ಯಾದಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸರ್ಕಾರಿ ಕೋಟಾದ ಸೀಟು ಪಡೆದಿರಬೇಕು.

– ಬಸವಬೆಳಗು ಯೋಜನೆ : 2022-23 ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ವ್ಯಾಸಂಗ ದೃಢೀಕರಣ ಮತ್ತು ಹಿಂದಿನ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸುವುದು.
– ವಿದೇಶ ವಿದ್ಯಾ ವಿಕಾಸ ಯೋಜನೆ (Fresh Students) : ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು ಅವರ ಕುಟುಂಬ ವಾರ್ಷಿಕದ ಆದಾಯ ರೂ. 8.00 ಲಕ್ಷಗಳಮಿತಿಯಲ್ಲಿರುವ ವಿದ್ಯಾರ್ಥಿಗಳು QS World Ranking 500 ರೊಳಗೆ ಬರುವ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್, ಪಿಹೆಚ್ಚಿ, ಮಾಸ್ಟರ್ ಡಿಗ್ರಿ ಕೋರ್ಸ್‍ಗಳಲ್ಲಿ ಉನ್ನತ ವ್ಯಾಸಂಗ ಪಡೆಯಲು ವಾರ್ಷಿಕ ಗರಿಷ್ಠ ರೂ.10.00ಲಕ್ಷಗಳಂತೆ 3ವರ್ಷದ ಅವಧಿಗೆ ಒಟ್ಟು ರೂ.20.00 ಲಕ್ಷಗಳನ್ನು ಶೂನ್ಯ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು.

– ವಿದೇಶ ವಿದ್ಯಾ ವಿಕಾಸ ಯೋಜನೆ (Renewals) : 2022-23 ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ವ್ಯಾಸಂಗ ದೃಢೀಕರಣ ಮತ್ತು ಹಿಂದಿನ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿಸಲ್ಲಿಸುವುದು.
ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಮಿತಿಯೊಳಗಿರುವ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಕೊಳವೆಬಾವಿ ಕೊರೆಸುವ ಮುಖೇನ ನೀರಾವರಿ ಸೌಲಭ್ಯ ಒದಗಿಸಲಾಗುವುದು.
ಜೀವಜಲ ಯೋಜನೆ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಘಟಕ ವೆಚ್ಚ ರೂ. 4.75 ಲಕ್ಷಗಳಲ್ಲಿ ರೂ. 4.25 ಲಕ್ಷಗಳು ಸಹಾಯಧನ ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50,000/- ಗಳ ಸಾಲವನ್ನು ಶೇ. 4 ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು. ಉಳಿದ ಜಿಲ್ಲೆಗಳಿಗೆ ಘಟಕ ವೆಚ್ಚ ರೂ. 3.75 ಲಕ್ಷಗಳಲ್ಲಿ ರೂ.3.25 ಲಕ್ಷ ಸಹಾಯಧನ ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50,000/- ಗಳ ಸಾಲವನ್ನು ಶೇ. 4 ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಇತರೇ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಒಳಗೆ ಜಮೀನು ಹೊಂದಿರಬೇಕು, ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ Farmers FRUIT ID ಮತ್ತು ಸಣ್ಣ ಹಿಡುವಳಿದಾರರ ಪ್ರಮಾಣಪತ್ರ ಹೊಂದಿರಬೇಕು.
ಕಾಯಕ ಕಿರಣ ಯೋಜನೆ: ವೀರಶೈವ-ಲಿಂಗಾಯತ ಸಮುದಾಯದ ನಿರುದ್ಯೋಗಿಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆಗಳಿಗನುಸಾರ ಈ ಕೆಳಕಂಡಂತೆ ಸಾಲ ಮತ್ತು ಸಹಾಯಧನ ಸೌಲಭ್ಯ ಒದಗಿಸಲಾಗುವುದು
ಘಟಕ ವೆಚ್ಚ ರೂ.1,00,000/-ಗಳಿಗೆ ಶೇ. 20ರಷ್ಟು ಗರಿಷ್ಠ ರೂ.20,000/-ಗಳ ಸಹಾಯಧನವನ್ನು ಹಾಗೂ ಉಳಿಕೆ ಶೇ.80ರಷ್ಟು ಗರಿಷ್ಠ ರೂ.80,000/-ಗಳನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡುವುದು.
ಘಟಕ ವೆಚ್ಚ ರೂ.2,00,000/- ಗಳಿಗೆ ಶೇ 15ರಷ್ಟು ಗರಿಷ್ಠ ರೂ.30,000/-ಗಳ ಸಹಾಯಧನವನ್ನು ಹಾಗೂ ಉಳಿಕೆ ಶೇ.85ರಷ್ಟು ಗರಿಷ್ಠ ರೂ.1,70,000/-ಗಳನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡುವುದು.
ಭೋಜನಾಲಯ ಕೇಂದ್ರ: ಸಮುದಾಯದ ಜನರು ಹೋಟೆಲ್ (ಖಾನಾವಳಿ) ಉದ್ಯಮ ಕೈಗೊಳ್ಳಲು ಈ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನ ನೀಡಲಾಗುವುದು ಹೋಟೆಲ್ ಉದ್ದಿಮೆ ಕೈಗೊಳ್ಳಲು ಘಟಕ ವೆಚ್ಚ ರೂ.5.00 ಲಕ್ಷ ಇದರಲ್ಲಿ ರೂ.4,60,000/- ಸಾಲ ಮತ್ತು ರೂ.40,000/- ಸಹಾಯಧನ ನೆರವು ನೀಡಲಾಗುವುದು. ಫಲಾನುಭವಿಗಳು ತಮ್ಮ ಸ್ವಂತ ಹೆಸರಿನಲ್ಲಿ ಕನಿಷ್ಠ 2030 ಅಳತೆಯುಳ್ಳ ನಿವೇಶನ ಹೊಂದಿರಬೇಕು.

ವಿಭೂತಿ ನಿರ್ಮಾಣ ಘಟಕ: ವೀರಶೈವ-ಲಿಂಗಾಯತ ಸಮುದಾಯದವರು ವಿಭೂತಿಯನ್ನು ತಯಾರಿಸುವವರಿಗೆ ಸಾಲ ಮತ್ತು ಸಹಾಯಧನ ನೀಡುವ ಯೋಜನೆ ಇದಾಗಿದೆ. ಕುಟುಂಬದ ವಾರ್ಷಿಕ ವರಮಾನ ರೂ.3.50 ಲಕ್ಷಗಳು ಮತ್ತು 18 ರಿಂದ 55 ವರ್ಷಗಳ ವಯೋಮಿತಿಯಲ್ಲಿರುವವರು ಅರ್ಜಿ ಸಲ್ಲಿಸಬಹುದು. ವಿಭೂತಿನ ರ್ಮಾಣ ಘಟಕ ನಿರ್ಮಿಸಲು ಘಟಕ ವೆಚ್ಚ ರೂ.4.00 ಲಕ್ಷ ಇದರಲ್ಲಿ ರೂ 3,60,000/- ಸಾಲ ಮತ್ತು ರೂ.40,000/- ಸಹಾಯಧನ ವಾರ್ಷಿಕ ಬಡ್ಡಿ ದರ ಶೇ.3% ದರದಲ್ಲಿ ನೆರವು ನೀಡಲಾಗುವುದು.
ಸ್ವಾವಲಂಬಿ ಸಾರಥಿ ಯೋಜನೆ: (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ನಿರುದ್ಯೋಗಿ ಚಾಲಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಭಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರವಾಹನ(ಹಳದಿಬೊರ್ಡ್) ಖರೀದಿಗೆ ಪಡೆಯುವ ಸಾಲಕ್ಕೆ ಶೇ.50ರಷ್ಟು ಅಥವಾ ಗರಿಷ್ಠ 3.00 ಲಕ್ಷಗಳ ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡಲಾಗುವುದು. ಉಳಿದ ಮೊತ್ತವನ್ನು ಬ್ಯಾಂಕ್/ ಹಣಕಾಸು ಸಂಸ್ಥೆಗಳ ಮೂಲಕ ಅವರು ವಿಧಿಸುವ ಚಾಲ್ತಿ ಬಡ್ಡಿದರದಲ್ಲಿ ಸಾಲ ಪಡೆಯುವುದು
ಸ್ವಯಂ ಉದ್ಯೋಗ ಸಾಲಯೋಜನೆ: (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಕೃಷಿ/ ಕೃಷಿ ಅವಲಂಭಿತ ಚಟುವಟಿಕೆಗಳು, ವ್ಯಾಪಾರ, ಸಾರಿಗೆ ಮತ್ತು ಯಂತ್ರೋಪಕರಣಗಳನ್ನು ಕೊಳ್ಳುವ ಆರ್ಥಿಕ ಚಟುವಟಿಕೆಗಳು/ ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕ್‍ಗಳ ಮೂಲಕ ಸಾಲ ಪಡೆದಿದ್ದಲ್ಲಿ ನಿಗಮದಿಂದ ಶೇ.20ರಷ್ಟು ಅಥವಾ ಗರಿಷ್ಟ ರೂ.1.00 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು.
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು. ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು/ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸುವುದು ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ/ ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿಸಲ್ಲಿಸಲು ಅರ್ಹರಿರುವುದಿಲ್ಲ.

ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್/ಶಿವಮೊಗ್ಗ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಅಕ್ಟೋಬರ್ 30ರೊಳಗಾಗಿ ಸಲ್ಲಿಸುವುದು.

ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ 080 22865522/ 9900012351 ಅನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಭಾಗ್ಯ ನಿಲಯ, 1ನೇ ತಿರುವು, ಗಾಂಧಿನಗರ,

ಶಿವಮೊಗ್ಗ, ದೂರವಾಣಿ ಸಂಖ್ಯೆ:08182-229634 ಇಲ್ಲ ಸಂಪರ್ಕಿಸಬಹುದು.

Related Articles

Stay Connected

0FansLike
3,912FollowersFollow
0SubscribersSubscribe

Latest Articles