ನಾಳೆ ನಗರದ ಸೈನ್ಸ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ

0
203

50ಕ್ಕೂ ಹೆಚ್ಚಿನ ಕಂಪನಿಗಳು ಭಾಗಿ

ನ.8ರಂದು ಶಿವಮೊಗ್ಗದಲ್ಲಿ ಬೃಹತ್
ಉದ್ಯೋಗ ಮೇಳ
ಶಿವಮೊಗ್ಗ: ನಗರದ ಸೈನ್ಸ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ನವೆಂಬರ್ 8ರಂದು ಆಯೋಜಿಸಿದ್ದು ರಾಜ್ಯದ 50ಕ್ಕೂ ಹೆಚ್ಚಿನ ಬೃಹತ್ ಕಂಪನಿಗಳ ಉದ್ಯೋಗದಾತರು ಆಗಮಿಸಿ 5 ಸಾವಿರಕ್ಕೂ ಹೆಚ್ಚಿನ ಯುವಕರಿಗೆ ಉದ್ಯೋಗಾವಕಾಶ ನೀಡಲಿದ್ದಾರೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ

ಕೌಶಲ್ಯಾಭಿವೃದ್ಧಿ  ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಸಹಯೋಗದಲ್ಲಿಬೃಹತ್ಉದ್ಯೋಗಮೇಳ

ಉದ್ಯೋಗ ಮೇಳದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಉತ್ತೀರ್ಣ ಮತ್ತು ಅನುತ್ತೀರ್ಣರಾದವರು, ಐಟಿಐ, ಡಿಪ್ಲೊಮಾ ಸೇರಿ ಎಲ್ಲ ರೀತಿಯ ಉನ್ನತ ಶಿಕ್ಷಣ, ತರಬೇತಿ ಪಡೆದ ಯುವಕರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದೆ. ಆನ್‌ಲೈನ್ ಮೂಲಕ ಹೆಸರು ನೋಂದಾಯಿಸಬಹುದು. ಮೇಳ ನಡೆಯುವ ದಿನದಂದು ಆಕಾಂಕ್ಷಿಗಳಿಗೆ ಸ್ಥಳದಲ್ಲಿಯೇ ಹೆಸರು ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ

ಸಾಫ್ಟ್‌ವೇರ್, ಆಟೋಮೊಬೈಲ್, ಫೌಂಡ್ರಿ, ರಿಟೇಲ್‌ ಫಾರ್ಮಸಿ, ಹಣಕಾಸು ವಿಮೆ, ಗಾರ್ಮೆಂಟ್ಸ್ ಸ್ಥಳೀಯ ಮತ್ತು ರಾಜ್ಯಮಟ್ಟದ ಬೃಹತ್ ಕಂಪನಿಗಳು ಭಾಗವಹಿಸಲಿವೆ. ಮೇಳದಲ್ಲಿ ಅಪ್ರೆಂಟಿಸ್‌ಶಿಫ್ ತರಬೇತಿ ಪಡೆಯಲಿಚ್ಚಿಸುವವರು, ಕೌಶಲ್ಯ ತರಬೇತಿ ಪಡೆಯುವವರು,
ಆಯ್ಕೆಗೊಂಡ ನಂತರ ನಿಗದಿಪಡಿಸಿದ ವಿಷಯದಲ್ಲಿ ತರಬೇತಿ ಪಡೆಯಲಿಚ್ಚಿಸುವವರು,
ಸ್ವಯಂ ಉದ್ಯೋಗ ಆರಂಭಿಸಲಿಚ್ಚಿಸುವವರು ಹೆಸರು ನೋಂದಾಯಿಸಬಹುದು ಇದೇ ಸಂದರ್ಭದಲ್ಲಿ ಆಸಕ್ತರಿಗೆ ಬ್ಯಾಂಕ್‌ಗಳ ಸಾಲಸೌಲಭ್ಯ ಮುಂತಾದ ಮಾಹಿತಿಗಳನ್ನು ಒದಗಿಸಲಾಗುವುದು.
ಜಿಲ್ಲೆಯ ಹಾಗೂ ನೆರೆಯ ಜಿಲ್ಲೆಗಳ ಉದ್ಯೋಗಾಕಾಂಕ್ಷಿಗಳು ಭಾಗವಹಿಸಲಿದ್ದಾರೆ
ಸಾವಿರಕ್ಕೂ ಹೆಚ್ಚಿನ ಯುವಕರಿಗೆ
ನೌಕರಿ ಸಾಧ್ಯತೆ.

ಅತ್ಯಂತ ಕಡಿಮೆ ಶುಲ್ಕದಲ್ಲಿ ಅತ್ಯಾಧುನಿಕ ರೀತಿಯ ಎಲೆಕ್ನಿಕ್ ವೆಹಿಕಲ್ ಮತ್ತು ರೋಬೋಟಿಕ್‌ ವಿಷಯಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಸುಮಾರು 70,000 ಮಕ್ಕಳು ಐಟಿಐ ಮತ್ತು ಡಿಪ್ಲೋಮಾ ತರಬೇತಿಗೆ ದಾಖಲಾಗಿದ್ದಾರೆ. ತರಬೇತಿ ಪಡೆದ ವಿದ್ಯಾರ್ಥಿಗಳು ಪಡೆದುಕೊಳ್ಳುವ ಪ್ರಮಾಣ ಪತ್ರಕ್ಕೆ ದೇಶ-ವಿದೇಶಗಳಲ್ಲಿ ಮಾನ್ಯತೆ
ದೊರೆಯಲಿದೆ.

– ಡಾ. ನಾಗೇಂದ್ರ ಎಫ್. ಹೊನ್ನಳ್ಳಿ, ಕೌಶಲ್ಯಾಭಿವೃದ್ಧಿ ಇಲಾಖೆಯ ನಿರ್ದೇಶಕ