Wednesday, September 25, 2024
spot_img

ಅಂತೂ ಚೈತ್ರ ಕುಂದಾಪುರಗೆ ಜಾಮೀನು!!?

ಬಿಜೆಪಿಯಿಂದ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ವಂಚನೆ ಮಾಡಿದ ಪ್ರಕರಣದ ಆರೋಪಿ ಚೈತ್ರಾಗೆ ಜಾಮೀನು ಸಿಕ್ಕಿದೆ.

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಬಂಧಿತಳಾಗಿದ್ದ ಚೈತ್ರಾಗೆ ಬೆಂಗಳೂರು ಮ್ಯಾಜಿಸ್ಟ್ರೇಟ್​ ಕೋರ್ಟ್​ ಜಾಮೀನು ನೀಡಿದೆ.

ವಂಚನೆ ಆರೋಪ ಪ್ರಕರಣ ಸಂಬಂಧ ಕಳೆದ ಸೆಪ್ಟೆಂಬರ್​ನಲ್ಲಿ ಚೈತ್ರಾ ಬಂಧನವಾಗಿತ್ತು.

ಬಳಿಕ ಚೈತ್ರಾ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು. ಉದ್ಯಮಿ ಗೋವಿಂದ್ ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಜೈಲು ಸೇರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಿಸಿಬಿಯು ಆರೋಪಿಗಳ ವಿರುದ್ಧ ಸುಮಾರು 800 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಈ ಮೂಲಕ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದ ತನಿಖೆಯನ್ನು ಸಿಸಿಬಿ ಮುಕ್ತಾಯಗೊಳಿಸಿದೆ.

ಪ್ರಕರಣದ ಪ್ರಮುಖ ಆರೋಪಿ ಆಗಿರುವ ಚೈತ್ರಾ, ಗಗನ್, ಹಾಲಶ್ರೀ ಸ್ವಾಮೀಜಿ, ರಮೇಶ್, ಪ್ರಜ್ವಲ್, ಶ್ರೀಕಾಂತ್, ಪ್ರಸಾದ್ ಬೈಂದೂರು ಸೇರಿ 9 ಮಂದಿ ಆರೋಪಿಗಳ ವಿರುದ್ಧ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿತ್ತು.

Related Articles

Stay Connected

0FansLike
3,912FollowersFollow
0SubscribersSubscribe

Latest Articles