Wednesday, September 25, 2024
spot_img

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ 23-24 ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!?

ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವತಿಯಿಂದ 2023-24 ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

B.A./ B.Com./ B.Sc./ B.B.A./ B.C.A./ B.S.W./ B.Lib.I.Sc./ M.A./ M.Sc./ M.B.A./ M.LiB.I.Sc./ M.C.A./ M.S.W./ PG Certificate/ Diploma/ UG Certificate ಶಿಕ್ಷಣಕ್ರಮಗಳಿಗೆ 2024 ಫೆಬ್ರವರಿ 09 ರಿಂದ ಬೆಂಗಳೂರು ಪ್ರಾದೇಶಿಕ ಕೇಂದ್ರ-೦1, ಬಾಪೂಜಿನಗರ ಇಲ್ಲಿ ಆನ್ಲೈನ್ ಮೂಲಕ ಪ್ರವೇಶಾತಿಯನ್ನು ಪ್ರಾರಂಭಿಸಿದ್ದು, 2024 ಮಾರ್ಚ್ 31 ಪ್ರವೇಶಾತಿಯ ಅಂತಿಮ ದಿನಾಂಕವಾಗಿರುತ್ತದೆ.

ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ www.ksoumysuru.ac.in ದಲ್ಲಿ ಲಭ್ಯವಿರುವ ವಿವರಣಾ ಪುಸ್ತಕದಲ್ಲಿ ಎಲ್ಲಾ ವಿವರಗಳು ನೀಡಿದ್ದು, ಆಸಕ್ತ ವಿದ್ಯಾರ್ಥಿಗಳು ಅದರನ್ವಯ ಅರ್ಹ ಶಿಕ್ಷಣಕ್ರಮಗಳಿಗೆ ವೆಬ್ಸೈಟ್ನಲ್ಲಿ ಲಭ್ಯವಿರುವ ಆನ್ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಅಥವಾ ಖುದ್ದು ಅಗತ್ಯ ದಾಖಲಾತಿಗಳೊಂದಿಗೆ ಬಾಪೂಜಿನಗರ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಪ್ರವೇಶಾತಿ ಪರ್ಣ ಪ್ರಕ್ರಿಯೆಯನ್ನು ಮಾಡಿಕೊಳ್ಳಬಹುದಾಗಿದೆ.

ವಿದ್ಯಾರ್ಥಿಗಳು Onlineನಲ್ಲಿ ಅರ್ಜಿ ಸಲ್ಲಿಸಿ ಅಥವಾ ಪ್ರಾದೇಶಿಕ ಕೇಂದ್ರಕ್ಕೆ ದಾಖಲಾತಿಗಳೊಂದಿಗೆ ಭೇಟಿ ನೀಡಿ ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬೇಕು.

Related Articles

Stay Connected

0FansLike
3,912FollowersFollow
0SubscribersSubscribe

Latest Articles