0
65

ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶಿವಮೊಗ್ಗ ಬಂಟರ ಭವನ ಉದ್ಘಾಟನಾ ಸಮಾರಂಭವನ್ನು ಇದೇ ಶನಿವಾರ ಸಂಜೆ 4 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾದ ಡಾ.ಎ. ಸತೀಶ್ ಕುಮಾರ್ ಶೆಟ್ಟಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಸಮಾರಂಭದ ಮುಖ್ಯ ಉದ್ಘಾಟಕರಾಗಿ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ ಎಸ್ ಯಡಿಯೂರಪ್ಪ ಇವರು ಆಗಮಿಸಲಿದ್ದಾರೆ. ಇವರ ಜೊತೆ ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಧು ಬಂಗಾರಪ್ಪ, ಸಂಸದರಾದ ಸನ್ಮಾನ್ಯ ಶ್ರೀ ಬಿ ವೈ ರಾಘವೇಂದ್ರ, ಶ್ರೀ ಪ್ರಕಾಶ್ ಶೆಟ್ಟಿ, ಶ್ರೀ ಮಂಜುನಾಥ ಭಂಡಾರಿ, ಶ್ರೀ ಕೆಎಸ್ ಈಶ್ವರಪ್ಪ ಶ್ರೀ ಎಸ್ ಎನ್ ಚನ್ನಬಸಪ್ಪ, ಶ್ರೀ ಎಸ್ ರುದ್ರೇಗೌಡ,

ಶ್ರೀ ಡಿಎಸ್ ಅರುಣ್, ಶ್ರೀ ಗುರುಮೇ ಸುರೇಶ್ ಶೆಟ್ಟಿ ಶ್ರೀ ಗುರುರಾಜ್ ಗಂಟೆ ಹೊಳೆ ಶ್ರ ಮತಿ ಭಾರತಿ ಶೆಟ್ಟಿ ಹಾಗೂ ಮುಂತಾದ ಸಮಾಜ ಬಾಂಧವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷರಾದ ಶ್ರೀ ಎಂ.ಕೆ. ಸುರೇಶ್ ಕುಮಾರ್,

ಸಿಮ್ಸ್ ಆಡಳಿತ ಮಂಡಳಿ ಮಾಜಿ ಸದಸ್ಯರಾದ ದಿವಾಕರ್ ಶೆಟ್ಟಿ, ಉಪಾಧ್ಯಕ್ಷರಾದ ಶ್ರೀ ವೈ.ವಿ. ಶೆಟ್ಟಿ, ಕಾರ್ಯದರ್ಶಿ ಸುರೇಶ್ ಶೆಟ್ಟಿ, ಖಜಾಂಚಿ ಸುರೇಶ್ ಕುಮಾರ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಮಹೇಶ್ ಶೆಟ್ಟಿ, ಸಹ ಕಾರ್ಯದರ್ಶಿ ಶ್ರೀ ರಾಜೀವ್ ಶೆಟ್ಟಿ,

ಪುಷ್ಪ ಶೆಟ್ಟಿ, ರಾಘವೇಂದ್ರ ಶೆಟ್ಟಿ, ರಾಜ್ ಮೋಹನ್ ಹೆಗಡೆ ರಮೇಶ ಶೆಟ್ಟಿ, ಕುಶಾಲ್ ಶೆಟ್ಟಿ ಪರಮೇಶ್ವರ ಶೆಟ್ಟಿ ಮಂಜುನಾಥ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.