ಅಯೋಧ್ಯೆ ಯಾತ್ರಿಕರು ಪ್ರಯಾಣಿಸುತ್ತಿದ್ದ ರೈಲಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ!?

0
350

AYODHYA TRAIN: ಅಯೋಧ್ಯೆ ಯಾತ್ರಿಕರು ಪ್ರಯಾಣಿಸುತ್ತಿದ್ದ ರೈಲಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ


ಬಳ್ಳಾರಿ: ಅಯೋಧ್ಯೆ (Ayodhya) ರಾಮಲಲ್ಲಾನ (Ramalalla) ದರ್ಶನ ಪಡೆದು ತಮ್ಮೂರಿಗೆ ವಾಪಾಸ್ಸಾಗುತ್ತಿದ್ದ ಯಾತ್ರಿಕರ ಬೋಗಿಗೆ ದುಷ್ಕರ್ಮಿಗಳು ನುಗ್ಗಿ, ರೈಲಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ ಘಟನೆ ಬಳ್ಳಾರಿಯಲ್ಲಿ (Ballari) ನಡೆದಿದೆ.
ಅಯೋಧ್ಯೆ ರಾಮನ ದರ್ಶನ ಪಡೆದು ಯಾತ್ರಿಕರು ಮೈಸೂರು- ಅಯೋಧ್ಯೆ ದಾಮಾ ರೈಲಿನಲ್ಲಿ (Mysore- Ayodhya Dham train) ತಮ್ಮೂರಿಗೆ ಮರಳುತ್ತಿದ್ದರು.
ಮಾರ್ಗ ಮಧ್ಯೆ ಹೊಸಪೇಟೆ ನಿಲ್ದಾಣದಲ್ಲಿ ರೈಲು ನಿಂತಿದೆ. ಈ ವೇಳೆ ಅನ್ಯಕೋಮಿನ ಮೂವರು ಯುವಕರು, ಅಯೋಧ್ಯೆ ಯಾತ್ರಿಕರಿಗೆ ಮೀಸಲಾಗಿದ ಬೋಗಿಯನ್ನು ನುಗ್ಗಿದ್ದಾರೆ. ಯುವಕರನ್ನ ತಡೆದ ಯಾತ್ರಿಕರು ಇದು ಅಯೋಧ್ಯೆ ಯಾತ್ರಿಕರಿಗೆ ಮೀಸಲು ಇರುವ ಬೋಗಿ ಇದರಲ್ಲಿ ತಾವು ಹತ್ತುವ ಹಾಗಿಲ್ಲ ಎಂದು ತಿಳಿ ಹೇಳಿದ್ದಾರೆ
ಆದರೆ ಇದನ್ನು ಲೆಕ್ಕಿಸದ ದುಷ್ಕರ್ಮಿಗಳು, ರೈಲು ಏನು ನಿಮ್ಮ ಅಪ್ಪನ ಮನೆದಲ್ಲ. ಇದಕ್ಕೆ ಬೆಂಕಿ ಹಚ್ಚಿ ಸುಟ್ಟು ಬಿಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಯಾತ್ರಿಕರು ತಕ್ಷಣವೇ ಈ ದುಷ್ಕರ್ಮಿಗಳನ್ನು ಹಿಡಿದು ರೈಲ್ವೆ ಪೊಲೀಸರಿಗೆ ಒಪ್ಪಿಸಿದ್ದಾರೆ. ನಂತರದಲ್ಲಿ ಅವರನ್ನು ಪ್ರಕರಣ ದಾಖಲಿಸಿ ವಿಚಾರಣೆ ಮಾಡದೆ  ಕಳಸಿದ ಮಾಹಿತಿ ತಿಳಿಯುತ್ತಿದ್ದಂತೆ  ಯುವಕರನ್ನ ಬಂಧಿಸಿ ಅವರ ವಿರುದ್ಧ ಎಪ್‌ಐಆರ್​ ದಾಖಲಿಸುವಂತೆ ಒತ್ತಾಯಿಸಿ ಪ್ರತಿಭಟನೆ ಇಳಿದಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳಲಾಗುತೆ  ಎಂದು ಪೊಲೀಸ್ ಭರವಸೆ ನೀಡದ ಬಳಿಕ ರೈಲು ಸಂಚಾರ ಆರಂಭವಾಯಿತು.