ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ ಬೆನ್ನಲ್ಲೇ ನೀತಿ ಸಂಹಿತೆ ಜಾರಿ: ಯಾವೆಲ್ಲ ಚಟುವಟಿಕೆಗೆ ನಿರ್ಬಂಧ? ಇಲ್ಲಿದೆ ವಿವರ

0
42
  • ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ ಬೆನ್ನಲ್ಲೇ ನೀತಿ ಸಂಹಿತೆ ಜಾರಿ:
  • ಯಾವೆಲ್ಲ ಚಟುವಟಿಕೆಗೆ ನಿರ್ಬಂಧ? ಇಲ್ಲಿದೆ ವಿವರ
    ಲೋಕಸಭೆ ಚುನಾವಣೆ ದಿನಾಂಕ ಪ್ರಕಟಗೊಂಡ ಬೆನ್ನಲ್ಲೇ ಚುನಾವಣಾ ಮಾದರಿ ನೀತಿ ಸಂಹಿತೆ ಕೂಡ ಜಾರಿಗೆ ಬರಲಿದೆ. ನೀತಿ ಸಂಹಿತೆ ನಿಯಮದಡಿ ಯಾವೆಲ್ಲ ಚಟುವಟಿಕೆಗಳಿಗೆ ನಿರ್ಬಂಧವಿದೆ? ಜನಸಾಮಾನ್ಯರ ಮೇಲೆ ಕೂಡ ಈ ನಿಯಮಗಳು ಹೇಗೆ ಪ್ರಭಾವ ಬೀರುತ್ತವೆ ಎಂಬ ವಿವರ ಇಲ್ಲಿದೆ.

ಲೋಕಸಭೆ ಚುನಾವಣೆ ದಿನಾಂಕ ಪ್ರಕಟಗೊಂಡ ಬೆನ್ನಲ್ಲೇ ಚುನಾವಣಾ ಮಾದರಿ ನೀತಿ ಸಂಹಿತೆ ಕೂಡ ಜಾರಿಗೆ ಬರಲಿದೆ. ನೀತಿ ಸಂಹಿತೆ ನಿಯಮದಡಿ ಯಾವೆಲ್ಲ ಚಟುವಟಿಕೆಗಳಿಗೆ ನಿರ್ಬಂಧವಿದೆ? ಜನಸಾಮಾನ್ಯರ ಮೇಲೆ ಕೂಡ ಈ ನಿಯಮಗಳು ಹೇಗೆ ಪ್ರಭಾವ ಬೀರುತ್ತವೆ ಎಂಬ ವಿವರ ಇಲ್ಲಿದೆ.

ನೀತಿ ಸಂಹಿತೆ ಎಂದರೇನು?

ದೇಶದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಚುನಾವಣಾ ಆಯೋಗ ಕೆಲವು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ನೀತಿ ಸಂಹಿತೆ ಎಂದು ಕರೆಯಲಾಗುತ್ತದೆ. ಲೋಕಸಭೆ ಅಥವಾ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಈ ನಿಯಮಗಳನ್ನು ಪಾಲಿಸುವುದು ಅಗತ್ಯ. ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬುದನ್ನು ನೀತಿ ಸಂಹಿತೆಯ ಅಡಿಯಲ್ಲಿ ತಿಳಿಸಲಾಗಿದೆ. ಭಾರತದ ಸಂವಿಧಾನದ 324 ನೇ ವಿಧಿಯ ಅಡಿಯಲ್ಲಿ, ಚುನಾವಣಾ ಆಯೋಗವು ಶಾಂತಿಯುತ ಚುನಾವಣೆಗಳಿಗಾಗಿ ನೀತಿ ಸಂಹಿತೆಯನ್ನು ಅನುಸರಿಸಲು ರಾಜಕೀಯ ಪಕ್ಷಗಳಿಗೆ ಸೂಚನೆ ನೀಡುತ್ತದೆ.
ನೀತಿ ಸಂಹಿತೆ ಮೊದಲು ಆರಂಭವಾದದ್ದು ಯಾವಾಗ?
1960 ರಲ್ಲಿ ಕೇರಳ ವಿಧಾನಸಭೆ ಚುನಾವಣೆಯಲ್ಲಿ ನೀತಿ ಸಂಹಿತೆಯನ್ನು ಮೊದಲು ಪರಿಚಯಿಸಲಾಯಿತು. 1962ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗ ಮೊದಲ ಬಾರಿಗೆ ಈ ನಿಯಮಗಳ ಬಗ್ಗೆ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿತ್ತು. ನೀತಿ ಸಂಹಿತೆ ವ್ಯವಸ್ಥೆಯು 1967ರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಿಂದ ಜಾರಿಗೆ ಬಂದಿತು. ಸಂಹಿತೆ ಜಾರಿಗೆ ಬಂದ ನಂತರ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನೌಕರರು ಚುನಾವಣಾ ಆಯೋಗದ ನೌಕರರಾಗಿ ಕೆಲಸ ಮಾಡಬೇಕೇ ಹೊರತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸರ್ಕಾರದ ನೌಕರರಲ್ಲ. ಚುನಾವಣೆ ಮುಗಿದ ನಂತರ ನೀತಿ ಸಂಹಿತೆ ರದ್ದ�