ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಅಪರಿಚಿತ ಶವಗಳು ಪತ್ತೆ

0
4

ತುಮಕೂರು: ಮೂರು ಅಪರಿಚಿತ ಶವಗಳು ತುಮಕೂರು(Tumakuru)ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆದರೆ, ಮೃತರ ವಿವರ ಇನ್ನೂ ಪತ್ತೆಯಾಗಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ತಡರಾತ್ರಿ ಕಾರಿಗೆ ಬೆಂಕಿ ಇಟ್ಟಿರುವ ಶಂಕೆ ವ್ಯಕ್ತವಾಗಿದೆ.

 

 

ತುಮಕೂರು, ಮಾ.22: ತುಮಕೂರು(Tumakuru)ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಮೂರು ಅಪರಿಚಿತ ಶವಗಳು ಪತ್ತೆಯಾಗಿದ್ದು, ಮೃತರ ಗುರುತು ತಿಳಿದುಬಂದಿಲ್ಲ. ನಿನ್ನೆ(ಮಾ.21) ರಾತ್ರಿ ನಡೆದಿರುವ ಘಟನೆ ಇದಾಗಿದ್ದು, ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಕೆರೆಗೆ ಕಾರು ತಳ್ಳಿರುವ ಶಂಕೆ ವ್ಯಕ್ತವಾಗಿದೆ. ಇದು ದಕ್ಷಿಣ ಕನ್ನಡ ಮೂಲದ ರಫಿಕ್ ಎಂಬುವರಿಗೆ ಸೇರಿದ ಕಾರು ಎನ್ನಲಾಗಿದೆ. ಸ್ಥಳಕ್ಕೆ ತುಮಕೂರು ಎಸ್ ಪಿ ಅಶೋಕ್ ಕೆ.ವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಘಟನೆ ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.