Wednesday, September 25, 2024
spot_img

ಕಾರಿನಲ್ಲಿ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಚಿನ್ನದ ಆಸೆಗೆ ಬಿದ್ದು ಪ್ರಾಣ ಕಳೆದುಕೊಂಡ ಮೂವರು

ತುಮಕೂರು(Tumakuru)ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಮೂವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದವರು ಎಂದು ತಿಳಿದು ಬಂದಿದ್ದು, ಇಸಾಕ್(56), ಸಾಹುಲ್(45) ಹಾಗೂ ಇಮ್ತಿಯಾಜ್(34) ಮೃತರು

 

ತುಮಕೂರು, ಮಾ.23: ತುಮಕೂರು(Tumakuru)ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಮೂವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದವರು ಎಂದು ತಿಳಿದು ಬಂದಿದ್ದು, ಇಸಾಕ್(56), ಸಾಹುಲ್(45) ಹಾಗೂ ಇಮ್ತಿಯಾಜ್(34) ಮೃತರು. ಇದೀಗ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸುತ್ತಿದ್ದು, ಬಳಿಕ ಪೊಲೀಸರು ಕುಟುಂಬಸ್ಥರಿಗೆ ಮೃತದೇಹಗಳನ್ನು ಹಸ್ತಾಂತರ ಮಾಡಲಿದ್ದಾರೆ. ಇನ್ನು ಕಾರಿನಲ್ಲಿ ಮೂವರ ಶವ ಪತ್ತೆ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

 

ಘಟನೆ ವಿವರ

 

ಮೊನ್ನೆ(ಮಾ.21) ರಾತ್ರಿ ನಡೆದಿರುವ ಘಟನೆ ಇದಾಗಿದ್ದು, ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಕೆರೆಗೆ ಕಾರು ತಳ್ಳಿರುವ ಶಂಕೆ ವ್ಯಕ್ತವಾಗಿತ್ತು. ಇದು ದಕ್ಷಿಣ ಕನ್ನಡ ಮೂಲದ ರಫಿಕ್ ಎಂಬುವರಿಗೆ ಸೇರಿದ ಕಾರು ಎನ್ನಲಾಗಿದೆ. ಸ್ಥಳಕ್ಕೆ ತುಮಕೂರು ಎಸ್ ಪಿ ಅಶೋಕ್ ಕೆ.ವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇನ್ನು ಭೇಟಿ ಬಳಿಕ ಮಾತನಾಡಿದ ತುಮಕೂರು ಎಸ್​ಪಿ ಅಶೋಕ್ ಕೆ.ವಿ. ಘಟನೆ ಕುರಿತು ಇವತ್ತು ಮಧ್ಯಾಹ್ನ 1 ಗಂಟೆಗೆ ನಮಗೆ ಮಾಹಿತಿ ಬಂದಿದೆ. ತುಮಕೂರು ಗ್ರಾಮಾಂತರದ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕುಚ್ಚಂಗಿ ಕೆರೆಯ ಮಧ್ಯದಲ್ಲಿ ವೈಟ್ ಕಲರ್ ಮಾರುತಿ ಎಸ್ ಪ್ರೆಸ್ ಕಾರಿನಲ್ಲಿ ಮೂರು ಮೃತದೇಹಗಳು ಸುಟ್ಟು ಸ್ಥಿತಿಯಲ್ಲಿ ಸಿಕ್ಕಿವೆ. ಕೂಡಲೇ ನಮ್ಮ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈಗ ಎಫ್ಎಸ್ಎಲ್ ಟೀಂ ಬಂದಿದೆ, ತಪಾಸಣೆ ನಡಿತಿದೆ. ಕಾರಿನ ನಂಬರ್ ಬೇಸ್ ಮೇಲೆ ಕಾರು ಎಲ್ಲಿಂದ ಬಂತು, ಹೇಗೆ ಬಂತು ಎಂಬುದರ ಬಗ್ಗೆ ತನಿಖೆ ನಡೆಸಲಾಗಿದೆ. ಈ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡು. ಪ್ರಕರಣವನ್ನ ಆದಷ್ಟು ಬೇಗ ಪತ್ತೆ ಮಾಡುತ್ತೇವೆ ಎಂದು ಹೇಳಿದ್ದರು

.ಪ್ರಕರಣಕ್ಕೆ ಬಿಗ್ ಟ್ವಿಸ್ಟ್​

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಿಂದ ತುಮಕೂರಿಗೆ ಬಂದಿದ್ದ ಮೂವರು, ಚಿನ್ನದ ಆಸೆಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಜಮೀನಿನಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಎಂದು ನಂಬಿಸಿ, ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇವೆ ಎಂದು ಆರೋಪಿಗಳು ಕರೆಸಿಕೊಂಡಿದ್ದಾರೆ. ಚಿನ್ನಖರೀದಿಗೆ ತಂದಿದ್ದ ಹಣ ದೋಚಲು ನಕಲಿ ಚಿನ್ನ ತೋರಿಸಿ ಮೂವರ ಮೇಲೂ ಹಲ್ಲೆಗೈದು ಕೈ, ಕಾಲು, ಕಟ್ಟಿಹಾಕಿ ಬೆಂಕಿಹಚ್ಚಿದ್ದಾರೆ. ಬಳಿಕ ಕಾರಿನ ಡಿಕ್ಕಿಯಲ್ಲಿ ಇಬ್ಬರ ಮೃತದೇಹ, ಮಧ್ಯಭಾಗದಲ್ಲಿ ಒಬ್ಬನ ಮೃತದೇಹ ಇಟ್ಟು ಕಾರಿಗೆ ಬೆಂಕಿ ಹಚ್ಚಿ ಎಸ್ಕೇಫ್​ ಆಗಿದ್ದಾರೆ.

 

ರಿಯಲ್ ಎಸ್ಟೇಟ್ ಕೆಲಸ ಮಾಡುತ್ತಿದ್ದ ಕೊಲೆಯಾದ ಇಸಾಕ್

ಇನ್ನು ಮೃತ ಇಸಾಕ್, ರಿಯಲ್ ಎಸ್ಟೇಟ್ ಕೆಲಸ ಮಾಡುತ್ತಿದ್ದ. ಡೀಲ್ ಇದೆ ಬಾ ಎಂದು ಸ್ನೇಹಿತನ ಕಾರು ಪಡೆದುಕೊಂಡಿದ್ದ ಇಸಾಕ್, ತನ್ನ ಜೊತೆ ಸಾಹುಲ್ ಅಮೀದ್, ಇಮ್ತಿಯಾಜ್​ನನ್ನು ಕರೆತಂದಿದ್ದ. ತುಮಕೂರು ಮೂಲದ ಸ್ವಾಮಿ ಎಂಬಾತನ ಪರಿಚಯದ ಮೂಲಕ ಬಂದಿದ್ದರು. ಕಳೆದ 11 ದಿನಗಳ ಹಿಂದೆ ತುಮಕೂರಿಗೆ ಬಂದಿದ್ದ ಮೂವರು, ಗುರುವಾರ ಸಂಜೆವರೆಗೂ ಕುಟುಂಬಸ್ಥರ ಜೊತೆ ಸಂಪರ್ಕದಲ್ಲಿದ್ದಾರೆ.

ಕೊಲೆಯಾದ ಇಸಾಕ್ ಮೊಬೈಲ್ ಗುರುವಾರ ರಾತ್ರಿ ಸ್ವಿಚ್‌ ಆಫ್ ಆಗಿತ್ತು. ಘಟನಾ ಸ್ಥಳದಲ್ಲಿದ್ದ ಕಾರಿನ ನಂಬರ್ ಆಧರಿಸಿ ಕಾರು ಮಾಲೀಕನ ಸಂಪರ್ಕ ಮಾಡಿದಾಗ ಇಸಾಕ್​ಗೆ 15 ದಿನಗಳ ಹಿಂದೆ ಕಾರು ಕೊಟ್ಟಿದ್ದಾಗಿ ಮಾಲೀಕ ರಫೀಕ್ ಹೇಳಿದ್ದಾರೆ. ಎ1 ಸ್ವಾಮಿ ಸೇರಿದಂತೆ 6 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Related Articles

Stay Connected

0FansLike
3,912FollowersFollow
0SubscribersSubscribe

Latest Articles