ನಗರHarassment: ಬೈಕ್‌ನಲ್ಲಿ ಕಾರನ್ನು ಬೆನ್ನಟ್ಟಿ ಮಹಿಳೆಗೆ ಕಿರುಕುಳ

0
27

ಬೆಂಗಳೂರು: ಚಲಿಸುತ್ತಿದ್ದ ಕಾರು ಹಿಂಬಾಲಿಸಿದ ನಾಲ್ಕೈದು ಮಂದಿ ಯುವಕರು ಕಾರಿನಲ್ಲಿದ್ದ ಮಹಿಳೆಗೆ ಕಿರುಕುಳ ನೀಡಿದ ಘಟನೆ ಮಡಿವಾಳ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಸಂಬಂಧ‌ ಪದವಿ ವಿದ್ಯಾರ್ಥಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ

ಶೇಷಾದ್ರಿಪುರ ನಿವಾಸಿಗಳಾದ ಜಗನ್ನಾಥ್‌ (28) ಮತ್ತು ತೇಜಸ್‌(21) ಬಂಧಿತರು. ಪ್ರಕರಣದಲ್ಲಿ ಮತ್ತೂಬ್ಬ ಆರೋಪಿ ಕಣ್ಣನ್‌ ಎಂಬಾತ ತಲೆಮರೆಸಿ­ಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಆರೋಪಿಗಳು ಭಾನುವಾರ ರಾತ್ರಿ ಹೊಸೂರು ಕಡೆಯಿಂದ ನಗರದ ಕಡೆ ಬರುವಾಗ ಕಾರಿನಲ್ಲಿದ್ದ ಮಹಿಳೆಗೆ ಕಿರುಕುಳ ನೀಡಿದ್ದರು. ಕೃತ್ಯದ ವಿಡಿಯೋವನ್ನು ಸನುಕ್‌ ಘೋಷ್‌ ಎಂಬುವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿ, ನಗರ ಪೊಲೀಸರಿಗೆ ಟ್ಯಾಗ್‌ ಮಾಡಿ ಕಾನೂನು ಕ್ರಮಕ್ಕೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಮಡಿವಾಳ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.