ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆಗೆ ಹೋಗಿದ್ದವನಿಗೆ ಚಾಕು ಇರಿತ, ಬಿಜೆಪಿಗರಿಂದ ಹಲ್ಲೆ ಆರೋಪ

0
7

ತುಮಕೂರು ಜಿಲ್ಲೆಯ ಕುಣಿಗಲ್(Kunigal) ತಾಲ್ಲೂಕಿನ ನಡೇಮಾವಿನಪುರದಲ್ಲಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಯುವಕನಿಗೆ ಚಾಕು ಇರಿದ ಆರೋಪ ಕೇಳಿಬಂದಿದೆ. ರಾಜಕೀಯ ವೈಷಮ್ಯ ಹಿನ್ನೆಲೆ‌ ಹಲ್ಲೆ ಮಾಡಿದ್ದಾರೆಂದು ಯೂತ್ ಕಾಂಗ್ರೆಸ್​ನ ಪ್ರಧಾನ ಕಾರ್ಯದರ್ಶಿಯಾಗಿರುವ ಕೀರ್ತಿ ಎಂಬುವವರು ದೂರು ನೀಡಿದ್ದಾರೆ.

 

ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆಗೆ ಹೋಗಿದ್ದವನಿಗೆ ಚಾಕು ಇರಿತ, ಬಿಜೆಪಿಗರಿಂದ ಹಲ್ಲೆ ಆರೋಪ

DK ಸುರೇಶ್ ನಾಮಪತ್ರ ಸಲ್ಲಿಕೆಗೆ ಹೋಗಿದ್ದವನ ಮೇಲೆ ಬಿಜೆಪಿಗರಿಂದ ಚಾಕು ಇರಿ

ತುಮಕೂರು, ಏ.07: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಡಿಕೆ ಸುರೇಶ್ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ತೆರಳಿದ್ದ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗೆ, ಬಿಜೆಪಿಯ ಮೂವರು ಕಾರ್ಯಕರ್ತರು ಹಲ್ಲೆ ಮಾಡಿ, ಬಳಿಕ ಚಾಕುವಿನಿಂದ ಇರಿದ ಆರೋಪ ಕೇಳಿಬಂದಿದೆ. ಕುಣಿಗಲ್ (Kunigal) ತಾಲ್ಲೂಕಿನ ನಡೇಮಾವಿನಪುರದಲ್ಲಿ ಘಟನೆ ನಡೆದಿದೆ. ವೆಂಕಟಗೌಡನಪಾಳ್ಯದ ಕೀರ್ತಿ ಹಲ್ಲೆಗೊಳಗಾದ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ. ಚಂದ್ರು, ಜಗದೀಶ್​, ಸುನೀಲ್ ಹಲ್ಲೆ ಮಾಡಿದ ಬಿಜೆಪಿ ಕಾರ್ಯಕರ್ತರೆಂದು ಗುರುತಿಸಲಾಗಿದೆ. ಹಲ್ಲೆಗೊಳಗಾದ ಕೀರ್ತಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಂಗ್ರೆಸ್​ ಮುಖಂಡ ಡಿಕೆ‌ ಸುರೇಶ್(DK Suresh) ಅವರ ನಾಮಪತ್ರ ಸಲ್ಲಿಕೆಗೆ ಯಾಕೆ‌ ಹೋಗಿದ್ದೆ ಅಂತ ಕೀರ್ತಿ ಅವರ ಜೊತೆ ಮೂವರು ಗಲಾಟೆ ತೆಗೆದಿದ್ದಾರೆ. ಬಳಿಕ ದೊಣ್ಣೆಯಿಂದ ಹಲ್ಲೆ ನಡೆಸಿ, ಚಾಕುವಿನಿಂದ ಇರಿದಿದ್ದಾರೆ ಅಂತ ಆರೋಪ ಕೇಳಿಬಂದಿದೆ. ರಾಜಕೀಯ ವೈಷಮ್ಯ ಹಿನ್ನೆಲೆ‌ಯಲ್ಲಿ ಹಲ್ಲೆ ಮಾಡಿದ್ದಾರೆಂದು ಯೂತ್ ಕಾಂಗ್ರೆಸ್​​ಪ್ರಧಾನ ಕಾರ್ಯದರ್ಶಿ ಕೀರ್ತಿ ಪೊಲೀಸರಿಗೆ ತಿಳಿಸಿದ್ದಾರೆ. ಇನ್ನು ಆರೋಪಿಗಳ ವಿರುದ್ಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.