ನಾಳೆಯ ರಾಹುಲ್ ಗಾಂಧಿ ಸಭೆಗೆ ಸುಮಾರು 1ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಮಧು ಬಂಗಾರಪ್ಪ!?

0
141

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾಶಿವರಾಜ್ ಕುಮಾರ್ ಪರವಾಗಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಎಐಸಿಸಿ ನಾಯಕ ರಾಹುಲ್ ಗಾಂಧಿಯವರು ಮೇ 2ರ ನಾಳೆ ಮಧ್ಯಾಹ್ನ 12ಕ್ಕೆ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ನಲ್ಲಿ ಮಾತನಾಡಲಿದ್ದಾರೆ. ಇದಕ್ಕಾಗಿ ಸಕಲ ಸಿದ್ಧತೆಗಳು ನಡೆದಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹೇಳಿದರು.

ಅವರು ಇಂದು ಫ್ರೀಡಂ ಪಾರ್ಕ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಹುಲ್‌ಗಾಂಧಿಯವ ರೊಂದಿಗೆ ಮುಖ್ಯಮಂತ್ರಿ
ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕಾರ್ಯದರ್ಶಿ ಮಯೂರು ಜಯಕುಮಾರ್ ಹಾಗೂ ಇನ್ನಿತರ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದರು. ಸಭೆಯಲ್ಲಿ ಸುಮಾರು 1ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಬೈಂದೂರು ಹೊರತು ಪಡಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕಿನಿಂದಲೂ ಸಹ ಕಾರ್ಯಕರ್ತರು ಭಾಗವಹಿ ಸಲಿದ್ದಾರೆ ಎಂದರು.

ಈ ಬಾರಿ ಮತ ಯಾಚನೆಯಲ್ಲಿ ನಮ್ಮ ಬೂತ್ ನಮ್ಮ ಜವಾಬ್ದಾರಿ ಘೋಷ ವಾಕ್ಯದೊಂದಿಗೆ ಎಲ್ಲರೂ ಒಟ್ಟಾಗಿ ಮತಯಾಚಿಸುತ್ತಿರುವು ದರಿಂದ ಗೀತಾಶಿವರಾಜ್‌ಕುಮಾರ್ ಅವರು ಹೆಚ್ಚಿನ ಮತಗಳ ಅಂತರ ದಿಂದ ಗೆಲುವು ಸಾಧಿಸಲಿದ್ದಾರೆ. ಹಾಗೆಯೇ ಕೇಂದ್ರದಲ್ಲೂ ಸಹ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದರು.

ಸಭೆಯಲ್ಲಿ ಸುಮಾರು 1ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ

ನಟ ಶಿವರಾಜ್‌ಕುಮಾರ್‌ ಅವರು ಸಹ ಜಿಲ್ಲೆಯ ಎಲ್ಲಾ ತಾಲ್ಲೂಕು ಗಳಲ್ಲಿ ಪ್ರವಾಸ ಮಾಡಿ ಮತಯಾಚಿಸಿದ್ದಾರೆ ಎಂದ ಅವರು ಮೇ 4ರಂದು ಶಿಕಾರಿಪುರ, ಶಿರಾಳಕೊಪ್ಪ, ಆನವಟ್ಟಿಯಲ್ಲಿ ರೋಡ್ ಶೋ ಹಾಗೂ ಕಾರ್ನರ್ಸಭೆ ನಡೆಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಮುಖಂಡರಾದ ಕಲಗೋಡು ರತ್ನಾಕರ್, ಎನ್. ಸಿ.ಹೆಚ್.

ಚಂದ್ರಭೂ ಪಾಲ್, ಮಂಜುನಾಥ್ ಬಾಬು, ಜಿತೇಂದ್ರ ಗೌಡ, ಚೇತನ್ ಉಪಸ್ಥಿತರಿದ್ದರು.