Wednesday, September 25, 2024
spot_img

ದೆಹಲಿಯಲ್ಲಿ ಮೋದಿ ಪ್ರಮಾಣ ವಚನ, ಶಿವಮೊಗ್ಗದಲ್ಲಿ ಬಿ.ಜೆ.ಪಿ. ಜೆ.ಡಿ.ಎಸ್. ಸಂಭ್ರಮಾಚರಣೆ,,

ದೆಹಲಿಯಲ್ಲಿ ಮೋದಿ ಪ್ರಮಾಣ ವಚನ, ಶಿವಮೊಗ್ಗದಲ್ಲಿ ಬಿ.ಜೆ.ಪಿ. ಜೆ.ಡಿ.ಎಸ್. ಸಂಭ್ರಮಾಚರಣೆ

ದೆಹಲಿ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿಬೋಧಿಸಿದ್ದಾರೆ.
ಜವಾಹರಲಾಲ್ ನೆಹರು ನಂತರ ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ.

ದೆಹಲಿಯಲ್ಲಿ ಪ್ರಧಾನ ಮಂತ್ರಿಯಾಗಿ ನರೇಂದ್ರ ದಾಮೋದರ್ ದಾಸ್ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಇತ್ತ ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುದ್ದಂತೆ ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಪಟಾಕಿ ಸಿಡಿಸಿ ಸಹಿ ಹಂಚಿ ಸಂಭ್ರಮಿಸಲಾಯಿತು

ಬಿ.ಜೆ.ಪಿ ಕಚೇರಿಯಲ್ಲಿ  ಶಾಸಕ ಚೆನ್ನಬಸಪ್ಪ, ಬಿಜೆಪಿ ಹಿರಿಯ‌ಮುಖಂಡ ಗಿರೀಶ್ ಪಟೇಲ್, ಎಂಎಲ್ ಸಿ ರುದ್ರೇಗೌಡ, ಮಾಜಿ ಎಂಎಲ್ ಸಿ ಆರ್ ಕೆ ಸಿದ್ದರಾಮಣ್ಣ ಮೊದಲಾದವರೊಂದಿಗೆ ಮೋದಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭ ವೀಕ್ಷಿಸಿದರು.

ಅದರಂತೆಯೇ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ದೆಹಲಿಯಲ್ಲಿ ಹೆಚ್ ಡಿ ಕುಮಾರ ಸ್ವಾಮಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಸಂಭ್ರಮಾಚರಣೆ ನಡೆಸಲಾಯಿತು.

ಮಾಜಿ ಶಾಸಕರಾದ
ಪ್ರಸನ್ನ ಕುಮಾರ್ ದೀಪಕ್ ಸಿಂಗ್ ವಿನಯ್ ವೆಂಕಟೇಶ್ ರಾಕೇಶ್ ಡಿಸೋಜಾ ನಿತಿನ್ ಹಾಗೂ ಹಲವಾರು ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರೊಂದಿಗೆ 72 ಸಚಿವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶ ವಿದೇಶಗಳ ಗಣ್ಯರು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಪೇಜಾವರ ಶ್ರಿಗಳು, ಚಿನ್ನಜೀಯರ್ ಸ್ವಾಮಿಜಿ ಸೇರಿದಂತೆ ವಿವಿಧ ಸಾಧು ಸಂತರು, ಮಠಾಧೀಶರು ಆರ್ ಎಸ್ ಎಸ್ ಮುಖಂಡರು ಕೂಡ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು.

ನಿರೀಕ್ಷೆಯಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಸಂಪುಟದಲ್ಲಿ  ಅತಿ ಹೆಚ್ಚು ಮತಗಳಿಂದ ಆಯ್ಕೆಯಾದ ಸಂಸದ ಬಿ ವೈ ರಾಘವೇಂದ್ರ ಅವರಿಗೆ ಸಚಿವ ಸ್ಥಾನ ದೊರಕಬಹುದು ಎನ್ನುವ ಭರವಸೆ ಇತ್ತು ಆದರೆ ಕೊನೆ ಕ್ಷಣದಲ್ಲಿ ಶಿವಮೊಗ್ಗದ ಜನತೆಗೆ ನಿರಾಸೆಯನ್ನು ಉಂಟುಮಾಡಿದೆ ಮುಂದಿನ ದಿನದಲ್ಲಿ ಸಚಿವ ಸ್ಥಾನ ದೊರಕಬಹುದು ಎಂಬ ನಿರೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆಯ ಜನತೆ

ಉಪ ರಾಷ್ಟ್ರಪತಿ ಜಗದೀಪ್ ಧನಕರ್, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ನೇಪಾಳಿ ಪ್ರಧಾನಿ ಪುಷ್ಪ ಕಮಲ್ ದಹಲ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಮತ್ತು ಸೆಶೆಲ್ಸ್ ಉಪಾಧ್ಯಕ್ಷ ಅಹ್ಮದ್ ಅಫೀಫ್ ಅವರು ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದರು

Related Articles

Stay Connected

0FansLike
3,912FollowersFollow
0SubscribersSubscribe

Latest Articles