ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.!?

0
132

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರೇಣುಕಸ್ವಾಮಿ ಎಂಬತನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸಿದ್ದಾರೆ ದರ್ಶನ್ ಆಪ್ತರಾಗಿರುವ ಪವಿತ್ರಾ ಗೌಡ ಎನ್ನುವವರ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎನ್ನುವವರು ಅಸಭ್ಯವಾಗಿ ಪೋಸ್ಟ್ ಮಾಡಿದ್ದರು ಎನ್ನಲಾಗಿದೆ. ಈ ಕುರಿತಂತೆ ದರ್ಶನ್ ಹಿಂಬಾಲಕರು ಎನ್ನುವ ಒಂದು ಗುಂಪು ರೇಣುಕಾಸ್ವಾಮಿ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು. ಇದರಿಂದಾಗಿ ರೇಣುಕಾಸ್ವಾಮಿ ಅವರು ಸಾವನ್ನಪ್ಪಿದ್ದು, ಬೆಂಗಳೂರಿನ ಕಾಮಾಕ್ಷಿಪಾಳ್ಯ ವ್ಯಾಪ್ತಿಯ ನಾಲೆ ಬಳಿಯಲ್ಲಿ ಶವ ಎಸೆದು ಪರಾರಿಯಾಗಿದ್ದರು.

ಘಟನೆಗೆ ಸಂಬಂಧಿಸಿದಂತೆ ಇದರಲ್ಲಿ ದರ್ಶನ್ ಪಾತ್ರ ಇದೆಯೋ, ಇಲ್ಲವೋ ಎಂಬುದು ತನಿಖೆಯಿಂದಷ್ಟೇ ತಿಳಿದುಬರಬೇಕಿದೆ. ಆದರೆ, ಪ್ರಾಥಮಿಕ ಹಂತದಲ್ಲಿ ದರ್ಶನ್ ಪಾತ್ರ ಇರುವ ಅನುಮಾನವಿರುವ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ವಶಕ್ಕೆ ಪಡೆದಿದ್ದು, ಕೆಲವೇ ಗಂಟೆಗಳಲ್ಲಿ ಅವರನ್ನು ಅರೆಸ್ಟ್ ತೋರಿಸುತ್ತಾರೆ ಎಂದು ವರದಿಯಾಗಿದೆ.