Wednesday, September 25, 2024
spot_img

BREAKING: ಉಪ ಲೋಕಾಯುಕ್ತರಾಗಿ ನ್ಯಾ.ಬಿ.ವೀರಪ್ಪ ನೇಮಕಾತಿ !?

ಬೆಂಗಳೂರು: ರಾಜ್ಯದ ಲೋಕಾಯುಕ್ತದ ಉಪ ಲೋಕಾಯುಕ್ತರನ್ನಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ನೇಮಕ ಮಾಡಲಾಗಿದೆ.
ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೇಮಕಾತಿ ಆದೇಶವನ್ನು ಪ್ರಕಟಿಸಿದ್ದು, ಅದರಲ್ಲಿ ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರನ್ನಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ನೇಮಕ ಮಾಡಿರುವುದಾಗಿ ತಿಳಿಸಿದ್ದಾರೆ.

ಅಂದಹಾಗೇ ಕೋಲಾರದ ಶ್ರೀನಿವಾಸಪುರ ತಾಲೂಕಿನ ನಾಗದೇನಹಳ್ಳಿ ಗ್ರಾಮದ ವೀರಪ್ಪ ಅವರು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾಗಿ ಅತಿ ಹೆಚ್ಚು ವ್ಯಾಜ್ಯಗಳನ್ನು ಇತ್ಯರ್ಥಪಡಿಸುವ ಮೂಲಕ ದಾಖಲೆ ಬರೆದಿದ್ದಾರೆ. ಅಲ್ಲದೇ ರಾಜ್ಯದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ಆದಾಯ ತಂದ ಸಂಚಾರ ನಿಯಮ ಉಲ್ಲಂಘನೆ ದಂಡದ ಮೇಲೆ ಶೇ.50ರಷ್ಟು ರಿಯಾಯಿತಿ ಘೋಷಿಸಿದ ರಾಜ್ಯ ಸರಕಾರ ಕ್ರಮದಲ್ಲಿ ವೀರಪ್ಪ ಅವರ ಪಾತ್ರ ಪ್ರಮುಖವಾಗಿತ್ತು.

ಕರ್ನಾಟಕ ಹೈಕೋರ್ಟ್‍ನಲ್ಲಿ ಸೇವೆ ಸಲ್ಲಿಸಿರುವ ವೀರಪ್ಪ ಅವರು ಈ ಹಿಂದೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಅಧಿಕಾರವನ್ನು ರದ್ದುಗೊಳಿಸಿ ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಪುನರ್ ಸ್ಥಾಪನೆ ಮಾಡಿದ್ದರು. ಈಗ ಇಂತಹ ಅವರನ್ನು ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರನ್ನಾಗಿ ನ್ಯಾಯಮೂರ್ತಿ ಬಿ ವೀರಪ್ಪ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಅಧಿಕೃತ ಆದೇಶ ಪ್ರಕಟಿಸಿದ್ದಾರೆ.

Related Articles

Stay Connected

0FansLike
3,912FollowersFollow
0SubscribersSubscribe

Latest Articles