Wednesday, September 25, 2024
spot_img

ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಪ್ರಕಾಶ್ ಜಿ ಎನ್. ಮನೆ ಲೋಕಾಯುಕ್ತ ದಾಳಿಯಲ್ಲಿ ಹಣ ಹಾಗೂ ಬಂಗಾರದ ರಾಶಿ .!?

ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಪ್ರಕಾಶ್ ಜಿ ಎನ್. ಮನೆ ಲೋಕಾಯುಕ್ತ ದಾಳಿಯಲ್ಲಿ ಹಣ ಹಾಗೂ ಬಂಗಾರದ ರಾಶಿ .!?

     ಪ್ರಕಾಶ್.ಜಿ.ಎನ್. ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಶಿವಮೊಗ್ಗ ರವರು ತಮ್ಮ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿರುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕಲಂ 13(1)(ಬಿ) ಸಹಿತ 13(2) ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ ಕಾಯ್ದೆ-2018) ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.

ಪ್ರಕಾಶ್.ಜಿ.ಎನ್. ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಶಿವಮೊಗ್ಗ ರವರು ಅಕ್ರಮ ಆಸ್ತಿಗಳಿಸಿರುವ ಪ್ರಕರಣದ ತನಿಖೆ ಕೈಗೊಂಡು ಶ್ರೀ ಪ್ರಕಾಶ್ ಜಿ.ಎನ್ ರವರಿಗೆ ಸಂಬಂಧಿಸಿದ 3 ಸ್ಥಳಗಳಲ್ಲಿ ದಿ:19/07/2024 ರಂದು ಶಿವಮೊಗ್ಗ ಲೋಕಾಯುಕ್ತ ಅಧಿಕಾರಿಗಳು ಸ್ಥಳ ಶೋಧನೆ ಮಾಡಿದ್ದು, ಪ್ರಕಾಶ್ ಜಿ.ಎನ್ ರವರಿಗೆ ಸಂಬಂದಿಸಿದಂತೆ 1 ಖಾಲಿ ನಿವೇಶನ, 2 ಮನೆಗಳು, 2.8 ಎಕರೆ ಕೃಷಿ ಜಮೀನು ಅಂದಾಜು ಸ್ಥಿರಾಸ್ಥಿ ಮೌಲ್ಯ ರೂ 1,57,00,000/- ಕಂಡು ಬಂದಿರುತ್ತದೆ. ಹಾಗೂ ಅವರ ವಾಸದ ಮನೆಯಲ್ಲಿ ರೂ 38,32,630/- ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳು, ಅಂದಾಜು 5,20,000/-ರೂ  ಮೌಲ್ಯದ  ವಾಹನಗಳು, ಅಂದಾಜು 11,30,000/-ರೂ ಮೌಲ್ಯದ ಗೃಹಪಯೋಗಿ ವಸ್ತುಗಳು ಮತ್ತು ರೂ 12,86,500/- ನಗದು ಹಣ ಪತ್ತೆಯಾಗಿರುತ್ತದೆ.

ನಂತರ ಈ ತನಿಖೆಯನ್ನು ಮುಂದುವರೆಸಿದ್ದು, ದಿ:20/07/2024 ರಂದು ಪ್ರಕಾಶ್ ಜಿ.ಎನ್ ರವರ ಪತ್ನಿ ಹೆಸರಿನಲ್ಲಿದ್ದ ಬ್ಯಾಂಕ್ ಲಾಕರ್‍ನ್ನು ಶೋಧನೆ ಮಾಡಲಾಗಿ ಈ ಬ್ಯಾಂಕ್ ಲಾಕರ್‍ನಲ್ಲಿ ರೂ,32,06,000/- ನಗದು ಹಣ ಮತ್ತು ಅಂದಾಜು ರೂ 18,48,200/- ಮೌಲ್ಯದ ಚಿನ್ನಾಭರಣಗಳು ಪತ್ತೆಯಾಗಿರುತ್ತದೆ. ಈ ಅಧಿಕಾರಿಯು ಅಂದಾಜು 2,05,23,330/- ರೂ ಮೌಲ್ಯದ ಅಕ್ರಮ ಆಸ್ತಿ ಸಂಪಾದನೆ ಮಾಡಿರುವುದು ತನಿಖೆಯಿಂದ ಕಂಡು ಬಂದಿರುತ್ತದೆ. ಹಾಗೂ ಅವರ ಮನೆ ಮತ್ತು ಲಾಕರ್ ನಲ್ಲಿ  ಪತ್ತೆಯಾದ ನಗದು ರೂ 44,06,000/- ಗಳನ್ನು  ತನಿಖೆ ಸಂಬಂದ ಅಮಾನತ್ತುಪಡಿಸಿಕೊಳ್ಳಲಾಗಿರುತ್ತದೆ. ಈ ಪ್ರಕರಣವನ್ನು ಶಿವಮೊಗ್ಗದ ಪೊಲೀಸ್ ಅಧೀಕ್ಷಕರಾದ ಮಂಜುನಾಥ್ ಚೌದರಿ ಎಂ.ಹೆಚ್. ರವರು ದಾಖಲಿಸಿದ್ದು, ಹೆಚ್.ಎಸ್.ಸುರೇಶ್ ಪೊಲೀಸ್ ನಿರೀಕ್ಷಕರು, ಕ.ಲೋ ಶಿವಮೊಗ್ಗ ಇವರು ತನಿಖೆಯನ್ನು ಮುಂದುವರೆಸಿರುತ್ತಾರೆ.

ದಾಳಿ ಸಮಯದಲ್ಲಿ  ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು, ಹಾಗೂ ಹಾವೇರಿ ಲೋಕಾಯುಕ್ತ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಗಳು ಭಾಗಿಯಾಗಿದ್ದರು.

Related Articles

Stay Connected

0FansLike
3,912FollowersFollow
0SubscribersSubscribe

Latest Articles