BREAKING NEWS : ಪ್ರಜ್ವಲ್​​ ರೇವಣ್ಣ ವಿಡಿಯೋಗಳು ಅಸಲಿ!?

0
126
Oplus_131072

ಬೇoಗಳೂರು : ಅತ್ಯಾಚಾರ ಆರೋಪದಡಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣ ಕುರಿತು ಸ್ಫೋಟ ಮಾಹಿತಿ ಹೊರಬಿದ್ದಿದೆ.
ಪ್ರಜ್ವಲ್​​​​ ರೇವಣ್ಣ ಅಶ್ಲೀಲ ವಿಡಿಯೋ ಪೆನ್​​​ ಡ್ರೈವ್​​​​​​​​ ಕೇಸ್ ಸಂಬಂಧ ಸೋಷಿಯಲ್​ ಮೀಡಿಯಾಗಳಲ್ಲಿ ಹರಿದಾಡಿದ ವಿಡಿಯೋಗಳೆಲ್ಲವೂ ಅಸಲಿ.

ಯಾವ ವಿಡಿಯೋಗಳನ್ನು ತಿರುಚಲಾಗಿಲ್ಲ ಎಂದು FSL (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿ ನೀಡಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೋಗಳಲ್ಲಿ ಪುರಷನ ಮುಖ ಸ್ಪಷ್ಟವಾಗಿ ಕಂಡುಬಂದಿಲ್ಲ. ಹೀಗಾಗಿ ವಿಡಿಯೋದಲ್ಲಿರುವ ವ್ಯಕ್ತಿ ಯಾರು ಎಂಬುವುದು ತನಿಖೆಯ ಬಳಿಕವೇ ತಿಳಿದುಬರಲಿದೆ.

ತನಿಖೆ ನಡೆಸುತ್ತಿರುವ ಎಸ್​​ಐಟಿ ತಂಡ ಪೆನ್‌ಡ್ರೈವ್‌ಗಳಿಂದ ಸಾಕಷ್ಟು ಅಶ್ಲೀಲ ವಿಡಿಯೋಗಳನ್ನು ಸಂಗ್ರಹ ಮಾಡಿತ್ತು. ಈ ವಿಡಿಯೋಗಳು ಅಸಲಿಯೋ, ನಕಲಿಯೋ ಎಂದು ತಿಳಿಯಲು ವಿಧಿ ವಿಜ್ಞಾನ ಲ್ಯಾಬ್​​​ ಗೆ ಕಳುಹಿಸಲಾಗಿತ್ತು. ಇದೀಗ ಇದರ ರಿಪೋರ್ಟ್ ಬಂದಿದ್ದು, ಎಲ್ಲಾ ವಿಡಿಯೋಗಳು ಅಸಲಿ ಎಂದು ಗೊತ್ತಾಗಿದೆ.

ಈ ಪ್ರಕರಣ ಬೆಳಕಿಗೆ ಬಂದ ಬಳಿಕ ಸುಮಾರು ಒಂದು ತಿಂಗಳಕಾಲ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದರು. ಎಸ್​​​ಐಟಿಯಿಂದ ತನಿಖೆ, ಬಂಧನ ಭೀತಿ ಹೆಚ್ಚಾದಂತೆಯೇ ಪ್ರಜ್ವಲ್ ತಾನಾಗಿಯೇ ಬೆಂಗಳೂರಿಗೆ ಬಂದು ಎಸ್​​​ಐಟಿಗೆ ಶರಣಾಗಿದ್ದು ಗೊತ್ತೇ ಇದೆ