ರಾಜ್ಯದ ಹತ್ತನೇ ಮುಖ್ಯಮಂತ್ರಿಯಾಗಿ (Tenth Chief Minister of the state), ಮಹಾರಾಷ್ಟ್ರದ ರಾಜ್ಯಪಾಲರಾಗಿ (Governor of Maharashtra) ದೇಶದ ವಿದೇಶಾಂಗ ಸಚಿವರಾಗಿ ಮತ್ತು ಭಾರತದ ರಾಜಕಾರಣದಲ್ಲಿ ಇನ್ನೂ ಅನೇಕ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದ ಎಸ್. ಎಂ. ಕೃಷ್ಣ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ವಯೋಸಹಜ ಅನಾರೋಗ್ಯದಿಂದ (A geriatric illness) ಬಳಲುತ್ತಿದ್ದ ಮಾಜಿ ಸಿಎಂ ಎಸ್. ಎಂ. ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ (private hospital) ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ಎಸ್. ಎಂ. ಕೃಷ್ಣ ಅವರನ್ನು ಬಳಿಕ ಶ್ವಾಸಕೋಶದ ಸೋಂಕು (Lung infection) ಕಾಣಿಸಿಕೊಂಡ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ಡಾ. ಸುನೀಲ್ ಕಾರಂತ್, ಡಾ. ಸತ್ಯನಾರಾಯಣ ಮೈಸೂರು ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದರು.
ಎಸ್‌ಎಂ ಕೃಷ್ಣ ಅವರಿಗೆ 92 ವರ್ಷ ವಯಸ್ಸಾಗಿತ್ತು.
ಬಹುಕಾಲದಿಂದ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ಎಸ್‌ಎಂ ಕೃಷ್ಣ ಅವರು ರಾಜಕೀಯ ಅಂತ್ಯದ (The end of politics) ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು.