ಕೇಸರ್, ಮಲಗೋವಾ, ಮಲ್ಲಿಕಾ, ಸಿಂಧೂರ, ಸವಿಯ ಬೇಕೆ ಭನ್ನಿ,! ಎಲ್ಲಿ ಯಾವಗ.?

0
102
Oplus_131072

 

ಏಪ್ರಿಲ್  26,27,28 ಸ್ಥಳ  ಮುಂದೆ ಓದಿ,,,,,,,

  ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗದ
ಕುಲಪತಿಗಳು ಡಾ.ಆರ್.ಸಿ. ಜಗದೀಶ್  ಇಂದಿನ ಪತ್ರಿಕಾ ಗೋಷ್ಠಿಯಲ್ಲಿ  ರೈತರಿಗೆ ಉತ್ತಮ ಮಾರುಕಟ್ಟೆ ಕಲ್ಪಿಸುವುದು ಈ ಮೇಳದ ಉದ್ದೇಶ. ಮುಖ್ಯವಾಗಿ ಈ ಮೇಳವು ರೈತರು, ವ್ಯಾಪಾರಿಗಳು, ರಫ್ತುದಾರರು, ಸರ್ಕಾರಿ ಅಧಿಕಾರಿಗಳು ಮತ್ತು ಇನ್ನಿತರ ಸಂಸ್ಥೆಗಳ ಮುಖ್ಯಸ್ಥರನ್ನು ಭೇಟಿ ಆಗಲು, ಸಂಪರ್ಕ ಹೊಂದಲು ಒಳ್ಳೆಯ ವೇದಿಕೆ ಆಗಲಿದೆ.

 

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗದ ಕೃಷಿ ವಿಜ್ಞಾನ ಕೇಂದ್ರವು 2025ಕ್ಕೆ ತನ್ನ 25 ವರ್ಷಗಳ ನಿರಂತರ ರೈತಪರ ಸೇವಾ ಕೊಡುಗೆಯನ್ನು ಪೂರೈಸಿ ರಜತ ಮಹೋತ್ಸವವನ್ನು ಆಚರಿಸಿಕೊಳ್ಳುವ ಸಂಭ್ರಮದಲ್ಲಿದೆ.

ಇದರ ಅಂಗವಾಗಿ ಶಿವಮೊಗ್ಗದ ಕೃಷಿ ವಿಜ್ಞಾನ ಕೇಂದ್ರ, ನವಿಲೆ ಆವರಣದಲ್ಲಿ ದಿನಾಂಕ 26 ರಿಂದ 28ನೇ ಏಪ್ರಿಲ್ 2025 ರವರೆಗೆ ‘ಹಣ್ಣು ಮತ್ತು ಆಹಾರ ಮೇಳ’ವನ್ನು ಆಯೋಜಿಸಲಾಗಿದೆ. ಮೂರು ದಿನಗಳ ಕಾಲ ಬೆಳಗ್ಗೆ 9 ರಿಂದ ರಾತ್ರಿ 9 ರವರೆಗೆ ಈ ಮೇಳ ಜರುಗಲಿದ್ದು, ಈ ಮೇಳದಲ್ಲಿ ವೈವಿಧ್ಯಮಯ ಮಾವಿನ ಹಣ್ಣುಗಳು, ಹಲಸು, ಬಾಳೆ ಹಾಗೂ ವಿವಿಧ ಜಾತಿಯ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗಿದೆ.

30 ವಿಶಿಷ್ಟ ಮಾವಿನ ತಳಿಗಳಾದ ಆಲ್ಫಾನ್ನೋ, ಬಾದಾಮಿ, ಕೇಸರ್, ಮಲಗೋವಾ, ಮಲ್ಲಿಕಾ, ನೀಲಂ, ರಸಪುರಿ, ಸಿಂಧೂರ, ತೋತಾಪುರಿ, ಅಪ್ಪೆ ಮಿಡಿ ತಳಿಗಳ ಪ್ರದರ್ಶನ ಮತ್ತು ಮಾರಾಟವಿರುತ್ತದೆ. ಅಲ್ಲದೆ, 20 ವಿವಿಧ ಹಲಸಿನ ತಳಿಗಳಾದ ಸಿದ್ದು ಹಲಸು. ಶಂಕರ, ಸರ್ವಋತು, ರುದ್ರಾಕ್ಷಿ, ಕೆಂಪು, ಚಂದ್ರ ಹಲಸು, ಹೆಬ್ಬಾಳ ಸೇರಿದಂತೆ ಸಖರಾಯಪಟ್ಟಣದ ಸ್ಥಳೀಯ ವಿಶೇಷ ತಳಿಗಳ ಪ್ರದರ್ಶನ ಹಾಗೂ ಮಾರಾಟ ಮತ್ತು ವಿವಿಧ ತಳಿಯ ಬಾಳೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮಾಡಲಾಗುತ್ತದೆ.
ಬಿಜಾಪುರ, ಬಾಗಲಕೋಟೆ ಮತ್ತಿತರ ಭಾಗಗಳಿಂದ ಥಾಟ್ಸನ್ ಸೀಡ್‌ಲೆಸ್, ಶರದ್, ಕೃಷ್ಣ ಶರದ್ ಇತ್ಯಾದಿ ತಳಿಯ ರುಚಿಕರ ದ್ರಾಕ್ಷಿ ಹಣ್ಣುಗಳು ಆಗಮಿಸುತ್ತಿವೆ. ಬೆಂಗಳೂರು ಗ್ರಾಮಾಂತರ ಭಾಗದಿಂದ ಬೆಂಗಳೂರು ಬ್ಲೂ ದ್ರಾಕ್ಷಿ ಬರಲಿದೆ. ಹೀಗಾಗಿ ದ್ರಾಕ್ಷಿ ಪ್ರಿಯರಿಗೆ ಬಗೆ ಬಗೆಯ ಹಣ್ಣುಗಳು ಲಭಿಸಲಿವೆ. ಅಲ್ಲದೆ, ಗೆಡ್ಡೆ-ಗೆಣಸು ತಳಿಗಳ ಪ್ರದರ್ಶನ ಹಾಗೂ ಬೇಲದ ಹಣ್ಣು, ಅಂಜೂರ ಹಣ್ಣು, ಬಿಜಾಪುರದ ನಿಂಬೆ ಹಣ್ಣು, ಮತ್ತು ಇವುಗಳ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಏರ್ಪಡಿಸಲಾಗಿದೆ ಮತ್ತು ರೈತರು ತಾವೇ ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳನ್ನು ಗ್ರಾಹಕರಿಗೆ ಮಾರಾಟ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಇದರ ಜೊತೆಗೆ ಬಹು ಬೇಡಿಕೆ ಉಳ್ಳ ಎಲಕ್ಕಿ,ದಾಲ್ಚಿನ್ನಿ, ಕೋಕಂ,ಸಸಿಗಳ ಬಗ್ಗೆಯೂ ಮಾಹಿತಿ ಮತ್ತು ಮಾರಾಟ,

ಮಲೆನಾಡಿನ ವಿಶಿಷ್ಟ ಸಿಹಿ ಖಾದ್ಯಗಳಾದ ತೊಡೆದೇವು, ಅಪ್ಪೆಮಿಡಿ, ಹಲಸು, ಬಾಳೆ, ಅನಾನಸ್, ಅಂಜೂರ, ಗೇರು, ಮುರುಗಲು, ಪುನರ್ಪುಳಿ ಇತ್ಯಾದಿಗಳ ಮೌಲ್ಯವರ್ಧಿತ ಉತ್ಪನ್ನಗಳೊಂದಿಗೆ ಸಿರಿಧಾನ್ಯಗಳ ಉತ್ಪನ್ನಗಳು ಮತ್ತು ಸ್ಥಳೀಯ ವಿಶಿಷ್ಟ ಖಾದ್ಯಗಳು, ಜೇನುತುಪ್ಪದ ಮೌಲ್ಯವರ್ಧಿತ ಉತ್ಪನ್ನಗಳು ಪ್ರದರ್ಶನ ಮತ್ತು ಮಾರಟ

ಈ ಮೇಳದಲ್ಲಿ ಹಣ್ಣಿನ ಸಸಿಗಳ ನರ್ಸರಿ, ಅಲಂಕಾರಿಕ ಗಿಡಗಳು, ತರಕಾರಿ ಮತ್ತು ಹೂವಿನ ಬೀಜಗಳು, ತಾರಸಿ / ಕೈತೋಟದ ಪರಿಕರಗಳ ಮಾರಾಟ ಮಳಿಗೆಗಳು, ಅಲಂಕಾರಿಕ ಮೀನುಗಳು, ಬಾಳೆಯ ನಾರು, ಬಿದರಿನ ನಾರು ಮತ್ತು ಮಣ್ಣಿನಿಂದ ತಯಾರಿಸಿದ ಹಲವು ಸ್ವಸಹಾಯ ಸಂಘಗಳ ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟವಿರುತ್ತದೆ. ಅಲ್ಲದೆ, ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗದ ಆವರಣದ ಪ್ರಾತ್ಯಕ್ಷಿಕೆಯಲ್ಲಿ ಸಮಗ್ರ ಕೃಷಿ ಪದ್ಧತಿ, ಜೇನು ಸಾಕಾಣಿಕೆ ಘಟಕ, ಕುರಿ ಮತ್ತು ಕೋಳಿ ಸಾಕಾಣಿಕೆ ಘಟಕ, ಜಲ ಕೃಷಿ (ಹೈಡೋಫೋನಿಕ್ಸ್), ಎರೆಹುಳು ಗೊಬ್ಬರ ತಯಾರಿಕೆ ಘಟಕ, ಕೊಳವೆ ಬಾವಿ ಜಲ ಮರುಪೂರಣ ಮಾದರಿ, ತಾರಸಿ ತೋಟ, ಅಲಂಕಾರಿಕ ಮೀನು ಘಟಕಗಳನ್ನು ಸಂದರ್ಶಿಸಿ, ಮಾಹಿತಿ ಪಡೆಯುವಂತೆ ಕರೆ ನೀಡುತ್ತಾ,
ಈ ರಜತ ಮಹೋತ್ಸವದಲ್ಲಿ ಪ್ರತಿದಿನ ವಿವಿಧ ವಿಷಯಗಳಲ್ಲಿ ತಾಂತ್ರಿಕ ಸಮಾವೇಶಗಳನ್ನು ಈ ಕೆಳಕಂಡ ದಿನಾಂಕಗಳಲ್ಲಿ ಆಯೋಜಿಸಲಾಗಿದೆ.

ದಿ: 26.04.2025 ಶನಿವಾರ
1) ವೈಜ್ಞಾನಿಕ ಜೇನು ಸಾಕಾಣಿಕೆ ಮತ್ತು ಜೇನಿನ ಮೌಲ್ಯವರ್ಧನೆ
2) ಜೇನು ವಿಷ ಬಳಕೆ
3) ನಸುರು ಜೇನು ಸಾಕಾಣಿಕೆ
4) ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ರಫ್ತು ಅವಕಾಶಗಳು, ಸಂಸ್ಕರಣೆ ಮತ್ತು ಮೌಲ್ಯವರ್ಧನೆ
ದಿನಾಂಕ: 27.04.2025 ಭಾನುವಾರ
1) ತಾರಸಿ ತೋಟ ಮತ್ತು ತ್ಯಾಜ್ಯ ವಸ್ತು ನಿರ್ವಹಣೆ

2) ಬೋನ್ಸಾಯ್ ಕೃಷಿ ವೈಶಿಷ್ಟ್ಯಗಳು

3) ರೈತ ಉತ್ಪಾದಕ ಸಂಘಗಳ ಒಕ್ಕೂಟ

4) ರೈತ ಉತ್ಪಾದಕ ಸಂಘಗಳ ರಚನೆ ಮತ್ತು ಭವಿಷ್ಯದ ನಿರೀಕ್ಷೆಗಳು

ದಿ: 28.04.2025 ಸೋಮವಾರ

1) ಗೋಡಂಬಿ ಬೆಳೆಯ ಉತ್ಪಾದನೆ ಮತ್ತು ಸಂಸ್ಕರಣೆ

2) ಕೋಕೊ ಬೆಳೆಯ ಉತ್ಪಾದನೆ, ಸಂಸ್ಕರಣೆ ಮತ್ತು ಮೌಲ್ಯವರ್ಧನೆ

ಈ ರಜತ ಮಹೋತ್ಸವದ ಅಂಗವಾಗಿ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಈ ಕೆಳಕಂಡಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ವಿಜೇತರಿಗೆ ಆಕರ್ಷಕ ಬಹುಮಾನವನ್ನು ಮತ್ತು ಭಾಗವಹಿಸಿದವರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

  1. ರೈತರು, ರೈತಮಹಿಳೆಯರು, ಯುವ ವ್ಯವಸಾಯಗಾರರು, ಉದ್ದಿಮೆದಾರರು, ಗ್ರಾಹಕರು, ವಿದ್ಯಾರ್ಥಿಗಳು, ಯುವಕರು, ಪೋಷಕರು ಹಾಗೂ ಮಕ್ಕಳು ಸೇರಿದಂತೆ ಎಲ್ಲಾ ವರ್ಗದ ಜನರು ಭಾಗವಹಿಸಿ, ಉತ್ಪನ್ನಗಳನ್ನು ಖರೀದಿಸಿ, ಸ್ವಾದಿಸಿ, ಆನಂದಿಸಿ ಈ ಮೇಳವನ್ನುಯಶಸ್ವಿಗೊಳಿಸಬೇಕೆಂದು ವಿವರಿಸಿದರು.
    ರೈತರು ವಿದ್ಯಾರ್ಥಿಗಳು ಜಿಲ್ಲೆಯ ಸಾರ್ವಜನಿಕರು ಸದುಪಯೋಗ ಪಡೆದು ಕೊಳ್ಳಲು ಸೂಚಿಸದರು ಈ ಸಮಯದಲ್ಲಿ  ಡಾ.ಜಿ.ಕೆ.ಗಿರಿಜೇಶ್,
    ಡಾ.ಡಿ.ತಿಪ್ಪೇಶ್, ಡಾ.ಸಿ.ಸುನಿಲ್, ಇನ್ನೂ ಮುಂತಾದ ವರು ಉಪಸ್ಥಿತ್ ಇದ್ದರು.