ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ವೈ.ಎಸ್ ವಿ ದತ್ತ

0
54


ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ವೈ.ಎಸ್ ವಿ ದತ್ತ
ಚುನಾವಣೆಗೂ ಮುನ್ನ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿ, ಬಳಿಕ ಜೆಡಿಎಸ್ ಗೆ ವಾಪಾಸ್ ಬಂದು ಸ್ಪರ್ಧಿಸಿದ್ದ ಹಿರಿಯ ರಾಜಕಾರಣಿ ವೈ.ಎಸ್ ವಿ ದತ್ತ ತಮ್ಮ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ದತ್ತ ಅವರು ಸೋಲನುಭವಿಸಿದ್ದಾರೆ. ಈ ಬೆನ್ನಲ್ಲೇ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಜೂನ್ 24ರಂದು ಪಶ್ಚಾತಾಪದ ಯಾತ್ರೆ ಕೈಗೊಳ್ಳಲು ನಿರ್ಧರಿಸಿದ್ದಾರೆ. ತನ್ನ ನಿವೃತ್ತಿ ಬಗ್ಗೆ ಕಡೂರು ಕ್ಷೇತ್ರದ ಜನತೆಗೆ ಸುದೀರ್ಘ ಪತ್ರವೊಂದನ್ನು ಬರೆದಿದ್ದಾರೆ.